ಬೆಂಗಳೂರು, ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ) :
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಜುಲೈ 5 ರಿಂದ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 30 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ ತಿತಿತಿ.ಞsಡಿಣಛಿ.oಡಿg/ಣಡಿಚಿಟಿsಜಿeಡಿರಲ್ಲಿ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪ್ರಸ್ತುತ, ನೌಕರರ ಹಿತದೃಷ್ಠಿಯಿಂದ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕಟೋಬರ್ 31 ರವರೆಗೆ ಸಂಜೆ 5:30 ರವರೆಗೆ ವಿಸ್ತರಿಸಿ ಅವಕಾಶ ಕಲ್ಪಿಸಲಾಗಿರುತ್ತದೆ. ನೌಕರರು ಸದರಿ ಸೌಲಭ್ಯದ ಸದುಪಯೋಗವನ್ನು ಪಡೆಯಬೇಕೆಂದು ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.