Site icon MOODANA Web Edition

ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

 ಬೆಂಗಳೂರು, ಸೆಪ್ಟೆಂಬರ್ 30 (ಕರ್ನಾಟಕ ವಾರ್ತೆ) :

ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ), ಜೀಜಾವು- ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಮರಾಠ ಮಿಲ್ಟ್ರಿ ಹೋಟೆಲ್ ಯೋಜನೆ, ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಾತಂತ್ರ್ಯ ಮಹೋತ್ಸವ ಮುನ್ನಡೆ ಯೋಜನೆಗಳ ಸಾಲ ಸೌಲಭ್ಯಕ್ಕಾಗಿ ಕರ್ನಾಟಕ ಮರಾಠ ಸಮುದಾಯಕ್ಕೆ ಸೇರಿದ ಫಲಾಪೇಕ್ಷಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23539600, 08023539601 ಜಾಲತಾಣ https://kmcdc.karnataka.gov.in   ಹಾಗೂ ಕಚೇರಿ ವಿಳಾಸ ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮುಖ್ಯ ರಸ್ತೆ, ಗಂಗಾನಗರ, ಬೆಂಗಳೂರು – 560032 ನ್ನು ಸಂಪರ್ಕಿಸಬಹುದಾಗಿದೆ  ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ

Exit mobile version