ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಅ.3: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ನೆಹರು ಬಿ.ಬಿ.ಎ ಮತ್ತು ಬಿ.ಸಿ.ಎ ಕಾಲೇಜು ಹುಬ್ಬಳ್ಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಬೃಹತ ಉದ್ಯೋಗ ಮೇಳವನ್ನು ಅಕ್ಟೋಬರ್ 7 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಘಂಟಿಕೇರಿಯ ನೆಹರು ಬಿ.ಬಿ.ಎ ಮತ್ತು ಬಿ.ಸಿ.ಎ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ ಸುಮಾರು 25 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಎಸ್.ಎಸ್.ಎಲ್,ಸಿ ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮಾ ಹಾಗೂ ಯಾವುದೇ ಪದವೀಧರ ಮತ್ತು ಸ್ನಾತಕೋತ್ತರ ಪದವೀಧರ 18 ರಿಂದ 35 ವಯಸ್ಸಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಹಾಜರಾಗಬಹುದು. ಅಭ್ಯರ್ಥಿಗಳು https://forms.gle/LGoU5cD1cR1dDpdB6 ವೆಬ್ ಸೈಟ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ 1 ಭಾವಚಿತ್ರ, ಆಧಾರ ಕಾರ್ಡ, ಬಯೋಡಾಟಾ (ರೆಸ್ಯೂಮ್) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9480869880, 8453208555, 8197440155, 7259888697, 9880666354 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ನವನಗರ, ಹುಬ್ಬಳ್ಳಿ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.