Site icon MOODANA Web Edition

ಹೊಸ ವಾಣಿಜ್ಯ ಬೆರಳಚ್ಚು ಹಾಗೂ ಶೀಘ್ರಲಿಪಿ ಶಿಕ್ಷಣ ಸಂಸ್ಥೆಗಳು ಪ್ರಾರಂಭಿಸಲು ಅರ್ಜಿ ಆಹ್ವಾನ

ಬೆಂಗಳೂರು, ಅಕ್ಟೋಬರ್ 03 (ಕರ್ನಾಟಕ ವಾರ್ತೆ) :

ಶಾಲಾ ಶಿಕ್ಷಣ ಇಲಾಖೆಯು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ವಾಣಿಜ್ಯ ಬೆರಳಚ್ಚು ಹಾಗೂ ಶೀಘ್ರಲಿಪಿ ಶಿಕ್ಷಣ ಸಂಸ್ಥೆಗಳನ್ನು ಹಾಗೂ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹ ನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸುವುದು. ಗುಲಬರ್ಗಾ ವಿಭಾಗಕ್ಕೆ ಸಂಬಂಧಪಟ್ಟಂತೆ ಸಹ ನಿರ್ದೇಶಕರು, ಅಪರ ಆಯುಕ್ತರ ಕಛೇರಿ, ಗುಲಬರ್ಗಾ, ಇವರಿಗೆ – ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಣ ಇಲಾಖೆ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಅಕ್ಟೋಬರ್ 31 ರೊಳಗೆ ಸಲ್ಲಿಸಬೇಕು.

ರಾಜ್ಯದಲ್ಲಿನ ಎಲ್ಲಾ ಅಂಗೀಕೃತ ವಾಣಿಜ್ಯ ಸಂಸ್ಥೆಗಳಲ್ಲಿ ಪ್ರಸ್ತುತ ನಡೆಸಲಾಗುತ್ತಿರುವ ಬೆರಳಚ್ಚು ಶೀಘ್ರಲಿಪಿ ಜೊತೆಗೆ ಕಂಪ್ಯೂಟರ್ ಶಿಕ್ಷಣ ಅಳವಡಿಸಿಕೊಳ್ಳಲು ಸರ್ಕಾರ 2006ರಲ್ಲಿ ಅದೇಶಿಸಿದ್ದು, ಅದರಂತೆÀ ಇಚ್ಚೆಯುಳ್ಳ ಸಂಸ್ಥೆಯವರು ಅರ್ಜಿ ಸಲ್ಲಿಸಬಹುದಾಗಿದೆ. ಖಾಸಗಿ ವ್ಯಕ್ತಿಗಳೂ ಸಹ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಾಲತಾಣ: www.schooleducation.kar.nic.in : secondary education – commerce education  ನಲ್ಲಿ ಪರಿಶೀಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಪ್ರೌಢಶಿಕ್ಷಣ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version