23 C
Karnataka
Saturday, March 21, 2026
spot_img

ಕೆಎಸ್‍ಒಯು ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂಗಳೂರು, ಅಕ್ಟೋಬರ್ 04 (ಕರ್ನಾಟಕ ವಾರ್ತೆ) :

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಯು.ಜಿ.ಸಿ. ವತಿಯಿಂದ ಅಕ್ಟೋಬರ್ 20 ರವರೆಗೆ ವಿಸ್ತರಿಸಿದೆ.

ಅಭ್ಯರ್ಥಿಗಳು ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಲಿಬ್.ಐ.ಎಸ್ಸಿ., ಎಂ.ಎ., ಎಂ.ಎಸ್ಸಿ., ಎಂ.ಬಿ.ಎ., ಎಂ.ಲಿಬ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೊಮಾ ಮತ್ತು ಯುಜಿ ಸರ್ಟಿಫಿಕೇಟ್ ಕೋರ್ಸುಗಳಿಗೆ ವಿಶ್ವವಿದ್ಯಾನಿಲಯದ ಅಧಿಕೃತ ಜಾಲತಾಣ www.ksoumysuru.ac.in  ನಲ್ಲಿ  ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಈಗಾಗಲೇ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹಾಗೂ ಇನ್ನೂ ಅರ್ಜಿ ಹಾಕಿಲ್ಲದೇ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಕಡೆಯ ದಿನಾಂಕದೊಳಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ಜಾಲತಾಣ  www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಹಾಗೂ ಕಛೇರಿ ದೂರವಾಣಿ ಸಂಖ್ಯೆ:080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ದಿಲೀಪ. ಡಿ. ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!