ಬೆಂಗಳೂರು, ಅಕ್ಟೋಬರ್ 05 (ಕರ್ನಾಟಕ ವಾರ್ತೆ) :
ಯುವಿಸಿಇ ವಿಶ್ವವಿದ್ಯಾಲಯ, ಕೆ.ಆರ್.ವೃತ್ತ, ಬೆಂಗಳೂರು – 01, ರಲ್ಲಿ 2023-24 ನೇ ಸಾಲಿನ ಬಿ.ಟೆಕ್ ವಿದ್ಯಾರ್ಥಿಗಳಿಗೆ Biology for Engineering ವಿಷಯವನ್ನು ಬೋಧಿಸುವ ನಿಟ್ಟಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ, ಅಕ್ಟೋಬರ್ 12 ರಂದು ಬೆಳಿಗ್ಗೆ 11 ಗಂಟೆಗೆ ಯುವಿಸಿಇ ಬೋರ್ಡ್ ರೂಂನಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಯುಜಿಸಿ ಅಥವಾ ಎಐಸಿಟಿಇ ನಿಯಮಾನುಸಾರ ತಮ್ಮ ಸೂಕ್ತ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗಿಯಾಗಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.