ಬೆಂಗಳೂರು, ಅಕ್ಟೋಬರ್ 06 (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ ಹಾಗೂ 40 ಹವಾ ನಿಯಂತ್ರಣ ರಹಿತ ಸ್ಲೀಪರ್ ಬಸ್ಸುಗಳ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 7 ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತಾ ಶರ್ಮಾ ಹಾಗೂ ಸಾರಿಗೆ ಇಲಾಖೆ ಕಾರ್ಯದರ್ಶಿಗಳಾದ ಡಾ. ಎನ್.ವಿ.ಪ್ರಸಾದ್ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದಾರೆ.