ಬೆಂಗಳೂರು, ಅಕ್ಟೋಬರ್ 06 (ಕರ್ನಾಟಕ ವಾರ್ತೆ) :
ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ 2023-24ನೇ ಸಾಲಿನಲ್ಲಿ ಎಂಫಿಲ್ ಮತ್ತು ಪಿಹೆಚ್.ಡಿ ಕೋರ್ಸ್‍ಗಳಿಗೆ ನೋಂದಣಿಯಾಗಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಎಂಫಿಲ್ ಮತ್ತು ಪಿಹೆಚ್.ಡಿ ಫೆಲೋಶಿಪ್ ಯೋಜನೆಯಡಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.