ಬೆಂಗಳೂರು, ಅಕ್ಟೋಬರ್ 06 (ಕರ್ನಾಟಕ ವಾರ್ತೆ) :
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ವಿಧಾನಸೌಧದ ಮೊದಲನೇ ಮಹಡಿಯಲ್ಲಿ ಡೆಲ್ಲಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸಂವಿಧಾನದಂತೆ ಕಾರ್ಯನಿರ್ವಹಿಸುತ್ತಿರುವ ರಾಜ್ಯಸಭೆ, ಲೋಕಸಭೆ, ವಿಧಾನಪರಿಷತ್ ಮತ್ತು ವಿಧಾನಸಭೆ ಕಾರ್ಯವೈಖರಿಗಳು, ಹಾಗೂ ಸದನಗಳ ಅಧಿವೇಶನ ಕಾರ್ಯಕಲಾಪಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಡೆಲ್ಲಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.