ಬೆಂಗಳೂರು, ಅಕ್ಟೋಬರ್ 07 (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ (Poiಟಿಣ ಣo Poiಟಿಣ) ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಸುಗಳಿಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ವೈಯಕ್ತಿಕ ಅಪಘಾತ ವಿಮಾ ಯೋಜನೆಯಲ್ಲಿ ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟ ನೌಕರರ ನಾಮ ನಿರ್ದೇಶಿತರಿಗೆ ಒಟ್ಟು ಒಂದು ಕೋಟಿಗಳ ಅಪಘಾತ ಪರಿಹಾರ ವಿಮಾ ಮೊತ್ತವನ್ನು ನೀಡಲಾಗುತ್ತದೆ. ಸಾರಿಗೆ ನಿಗಮಗಳಲ್ಲಿ, ದೇಶದಲ್ಲಿಯೇ ಪ್ರಥಮ ಬಾರಿಗೆ ಕರಾರಸಾ ನಿಗಮದಲ್ಲಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 4 ಜನ ಮೃತ ನೌಕರರ ಅವಲಂಬಿತರಿಗೆ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಯಿತು.
ಸಾರ್ವಜನಿಕ ಸಮೂಹ ಸಾರಿಗೆಯನ್ನು ಉತ್ತೇಜಿಸಲು ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ಒದಗಿಸಲು ನಿಗಮವು ಕಾರ್ಯಕ್ರಮದಲ್ಲಿ 40 ನಾನ್‍ಎಸಿ ಸ್ಲೀಪರ್ ವಾಹನಗಳು – ಪಲ್ಲಕ್ಕಿ ಹಾಗೂ 100 ಕರ್ನಾಟಕ ಸಾರಿಗೆ ವಾಹನಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಹಿಂದಿನ ಕಾಲದಲ್ಲಿ ರಾಜ, ಮಹಾರಾಣಿಯರನ್ನು ಪಲ್ಲಕ್ಕಿಯಲ್ಲಿ ಕರೆದೊಯ್ಯುತ್ತಿದ್ದರು. ಇಂದು ಪ್ರತಿ ಮನೆಯ ಮಹಿಳೆಯರನ್ನು ಕರೆದೊಯ್ಯಲು ನಾನ್ ಎಸಿ ಸ್ಲೀಪರ್ ವಾಹನವಾದ ಪಲ್ಲಕ್ಕಿಯು ಹೊರಲಿದೆ. ಈ ಬಸ್‍ಗೆ ಪಲ್ಲಕ್ಕಿ ಎಂದು ಹೆಸರಿಟ್ಟವರಿಗೆ ಪ್ರಮಾಣಪತ್ರ ನೀಡಿ ಗೌರವಿಸಬೇಕು ಎಂದರು.
ನವದೆಹಲಿ ಸೇರಿದಂತೆ ಬೇರೆ ರಾಜ್ಯಗಳ ಸಾರಿಗೆ ಸಂಸ್ಥೆಗಳನ್ನು ಭೇಟಿ ನೀಡಿದಾಗ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‍ಗಳ ಪೊಟೋಗಳನ್ನು ಅವರು ಬಳಸುತ್ತಿದ್ದು, ರಾಜ್ಯದ ಸಾರಿಗೆ ಸಂಸ್ಥೆಗಳು ದೇಶದಲ್ಲೇ ಅತ್ಯುತ್ತಮ ಸೇವೆ ನೀಡುತ್ತಿರುವ ಸಾರಿಗೆ ಸಂಸ್ಥೆಗಳಾಗಿವೆ ಎಂದು ತಿಳಿಸಿ ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಸಾರಿಗೆ ಅಧಿಕಾರಿ ಸಿಬ್ಬಂದಿ ವರ್ಗದವರಿಗೆ ಅಭಿನಂದನೆ ಸಲ್ಲಿಸಿದರು.
ಹೆಣ್ಣು ಕುಟುಂಬದ ಕಣ್ಣಾಗಿದ್ದು ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೂ ಸುಮಾರು 70.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದಾರೆ ಎಂದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ ಪ್ರತಿ ವರ್ಷ ಶೇ.10ರಷ್ಟು ಬಸ್‍ಗಳು ಸ್ಥಗಿತಗೊಳಿಸಿ ಹೊಸ ಬಸ್‍ಗಳನ್ನು ಖರೀದಿಸಬೇಕಾಗುತ್ತದೆ. ಪ್ರತಿ ವರ್ಷ ನಿಗಮದಲ್ಲಿ ನಿವೃತ್ತಿ ಹೊಂದುವವರ ಸಂಖ್ಯೆಯು ಹೆಚ್ಚುತ್ತಿದ್ದು, ಹೊಸದಾಗಿ ನೇಮಕಾತಿ ಮಾಡಬೇಕಾಗುತ್ತದೆ. ರಾಜ್ಯದಲ್ಲಿ ಜನಸಂಖ್ಯೆಯು ಹೆಚ್ಚುತ್ತಿದ್ದು ಜನಸಂಖ್ಯೆಗೆ ಅನುಗುಣವಾಗಿ ಸಾರಿಗೆ ಬಸ್‍ಗಳು ಇಲ್ಲ. ಜನಸಂಖ್ಯೆಗೆ ಅನುಗುಣವಾಗಿ ಸುಮಾರು 12000 ಬಸ್‍ಗಳ ಸೇರ್ಪಡೆಯಾಗಬೇಕು.
ಇದುವರೆಗೆ ನಿಗಮದಲ್ಲಿ ಠಿoiಟಿಣ-ಣo-ಠಿoiಟಿಣ ಹಾಗೂ ದೂರದ ಊರುಗಳ ವೇಗದೂತ ಸಾರಿಗೆಗಳಿಗೆ ಒಂದೇ ಮಾದರಿಯ ಬಸ್ಸುಗಳನ್ನು ಕಾರ್ಯಾಚರಿಸಲಾಗುತ್ತಿತ್ತು. ಪ್ರಸ್ತುತ ಠಿoiಟಿಣ-ಣo-ಠಿoiಟಿಣ ಸಾರಿಗೆಗಳಿಗೆ ಪ್ರತ್ಯೇಕ ನೂತನ ಮಾದರಿಯ ಬಸ್ಸುಗಳನ್ನು ಪರಿಚಯ ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೆÇನ್ನಣ್ಣ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.