22 C
Karnataka
Sunday, March 22, 2026
spot_img

ಹವಾಮಾನ ಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ರಾಷ್ಟ್ರೀಯ ಸಮ್ಮೇಳನ

ಬೆಂಗಳೂರು, ಅಕ್ಟೋಬರ್ 07 (ಕರ್ನಾಟಕ ವಾರ್ತೆ) :

ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು “ಹವಾಮಾನಸ್ಥಿತಿಸ್ಥಾಪಕತ್ವ ಮತ್ತು ಸುಸ್ಥಿರ ಅಭಿವೃದ್ಧಿ” (Climate Resilience and Sustainable Development) ವಿಷಯದ ಕುರಿತು ರಾಷ್ಟ್ರೀಯ ಸಮ್ಮೇಳವನ್ನು ನವೆಂಬರ್ 22 ರಿಂದ 24ರವರೆಗೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಜಿ.ಕೆ.ವಿ.ಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಇಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಮ್ಮೇಳನದಲ್ಲಿ ನುರಿತ ಸಂಪನ್ಮೂಲ ತಜ್ಞರು ಉಪನ್ಯಾಸ ನೀಡಲಿದ್ದಾರೆ. “ಕಾಗದದ ಪ್ರಸ್ತುತಿ ಮತ್ತು ಕೆಲಸದ ಮಾದರಿ” ಸಹ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ಕಾಗದದ ಪ್ರಸ್ತುತಿಗಳಿಗೆ ಬಹುಮಾನಗಳನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಸಂಶೋಧಕರು / ವಿಜ್ಞಾನಿಗಳು ಹಾಗೂ ಪ್ರಾಧ್ಯಾಪಕರು / ಉಪನ್ಯಾಸಕರು ಭಗವಹಿಸಬಹುದಾಗಿದ್ದು, ನಿಗದಿತ ಶುಲ್ಕವನ್ನು ಪಾವತಿಸಿ ನವೆಂಬರ್ 15ರೊಳಗಾಗಿ ಗೂಗಲ್ ಫಾರಂ https://forms.gle.VBZdYHcawb4uU9Jb9 ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚಿನ ಮಾಹಿತಿಗಾಗಿ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎ.ಎಂ. ರಮೇಶ್ ಮೊಬೈಲ್ ದೂರವಾಣಿ ಸಂಖ್ಯೆ 9845258894 ಅಥವಾ ಜಾಲತಾಣ www.kstacademy.in ನ್ನು ಸಂಪರ್ಕಿಸಬಹದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!