ಬೆಂಗಳೂರು, ಅಕ್ಟೋಬರ್ 26 (ಕರ್ನಾಟಕ ವಾರ್ತೆ):
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರು (ಉಳಿಕೆ ಮೂಲ ವೃಂದ) ಹುದ್ದೆಗಳಿಗೆ ಸೆಪ್ಟೆಂಬರ್ 21 ರಂದು ನಡೆಸಿದ ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಸೆಪ್ಟೆಂಬರ್ 22 ರಂದು ಪ್ರಕಟಿಸಿ, ಕೀ ಉತ್ತರಗಳ ಕುರಿತಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 29 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿದ್ದು, ಪರಿಷ್ಕøತ ಕೀ ಉತ್ತರಗಳನ್ನು ಅಕ್ಟೋಬರ್ 10 ರಂದು ಆಯೋಗದ ಜಾಲತಾಣದಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.