Site icon MOODANA Web Edition

ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ

ಬೆಂಗಳೂರು, ಅಕ್ಟೋಬರ್ 26, (ಕರ್ನಾಟಕ ವಾರ್ತೆ) :

ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್‍ನ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿμÁ್ಠನ ಸಪ್ತಾಹವನ್ನು ಉದ್ಘಾಟಿಸಲು ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಹಾಗೂ ಮುಖ್ಯ.ಮಂತ್ರಿಗಳಾದ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ವಂದಿತ ಶರ್ಮಾ, ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ನಗರ ಪೆÇಲೀಸ್ ಆಯುಕ್ತರಾದ ಬಿ.ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಕೆ.ಎ. ದಯಾನಂದ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version