Site icon MOODANA Web Edition

ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು, ಅಕ್ಟೋಬರ್ 26 (ಕರ್ನಾಟಕ ವಾರ್ತೆ):

ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಇಲಾಖೆಗಳಲ್ಲಿನ ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಳ ಸಂಬಂಧ ಜಲಸಂಪನ್ಮೂಲ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) 03 (ಹೈ.ಕ) ಮತ್ತು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ 05 (ಹೈ.ಕ) ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಕಟ್‍ಆಪ್ ಅಂಕಗಳನ್ನು ಆಯೋಗದ ಜಾಲತಾಣ http://kpsc.kar.nic.in/lists   ನಲ್ಲಿ ಪ್ರಕಟಿಸಿದೆ.

ತಾತ್ಕಾಲಿಕ ಆಯ್ಕೆಪಟ್ಟಿಗಳಿಗೆ ಕುರಿತಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಆಯ್ಕೆಪಟ್ಟಿ ಪ್ರಕಟಿಸಿದ  ದಿನಾಂಕದಿಂದ 07 ದಿನಗಳೊಳಗಾಗಿ “ಕಾರ್ಯದರ್ಶಿ” ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು – 560001, ಇವರಿಗೆ ಸಂಬಂಧಿತ ಹುದ್ದೆಯ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ ಲಿಖಿತ ರೂಪದಲ್ಲಿ ಸಲ್ಲಿಸಬೇಕು.  07 ದಿನಗಳ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಕೆ.ಎಸ್. ಲತಾ ಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version