Site icon MOODANA Web Edition

ಸಹಾಯಧನಕ್ಕಾಗಿ ಸಂಬಾರು ಬೆಳೆಗಾರರಿಂದ ಅರ್ಜಿ ಆಹ್ವಾನ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಅ.26: 2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ವತಿಯಿಂದ ಸಂಬಾರು ಬೆಳೆಗಾರರಿಗೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ತೋಟಗಾರಿಕೆ ನಿಗಮ ಮತ್ತು ಮಂಡಳಿಗಳಿಗೆ ಸಹಾಯಧನ ಉಪಯೋಜನೆಯಡಿ ಯಾಂತ್ರೀಕರಣ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಅನುಮೋದಿತ ಸರಬರಾಜುದಾರರು, ಕಂಪನಿಗಳಿಂದ ರೈತರು ಖರೀದಿಸುವ ಅನುಮೋದಿತ ಯಂತ್ರೋಪಕರಣಗಳಿಗೆ ಹಾಗೂ ಸಂಬಾರು ಬೆಳೆಗಳ ಪ್ರಾಥಮಿಕ ಸಂಸ್ಕರಣಾ ಘಟಕ, ಸೌರ ಶಾಖ ಘಟಕಗಳಿಗೆ ಇಲಾಖಾ ಮಾರ್ಗಸೂಚಿಗಳನ್ವಯ ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರೈತರು ಮಂಡಳಿಯ ಜಾಲತಾಣ kssdb.Karnataka.gov.in ಮೂಲಕ ಅರ್ಜಿಗಳನ್ನು ಪಡೆಯಬಹುದು. ಆಸಕ್ತಿಯುಳ್ಳ ಸಂಬಾರು ಬೆಳೆಗಾರರು ಸಹಾಯಧನಕ್ಕಾಗಿ ಮಂಡಳಿಗೆ ನವೆಂಬರ್ 26 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಮೊದಲು ಬಂದವರಿಗೆ ನಿಯಮಾನುಸಾರ ಮೊದಲ ಆದ್ಯತೆ ನೀಡುವ ಮೂಲಕ ನಿಗದಿಪಡಿಸಿದ ಆರ್ಥಿಕ ಹಾಗೂ ಭೌತಿಕ ಗುರಿಗಳ ಮಿತಿಯಲ್ಲಿ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ, ನೇಕಾರ ಭವನ, ವಿದ್ಯಾನಗರ, ಹುಬ್ಬಳ್ಳಿ ಕಾರ್ಯಾಲಯ ಅಥವಾ ದೂರವಾಣಿ ಸಂಖ್ಯೆ 0836-2375030 ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಸಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version