21.2 C
Karnataka
Tuesday, July 8, 2025
spot_img

ಸಮಗ್ರ ಕರಡು ಮತದಾರರ ಪಟ್ಟಿ ಪ್ರಕಟ : ಮನೋಜ್ ಕುಮಾರ್ ಮೀನಾ

ಬೆಂಗಳೂರು, ಅಕ್ಟೋಬರ್ 27 (ಕರ್ನಾಟಕ ವಾರ್ತೆ):
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಜನವರಿ 01, 2024ರಂತೆ ಮತದಾರರ ಪಟ್ಟಿಗಳ ಪರಿಷ್ಕರಣೆ ಪ್ರಗತಿಯಲ್ಲಿದ್ದು, ಇಂದು 224 ಕ್ಷೇತ್ರಗಳ  ಕರಡು ಮತದಾರರ ಪಟ್ಟಿಗಳನ್ನು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿಗಳು, ಮತದಾರರ ನೋಂದಣಾ ಅಧಿಕಾರಿಗಳ ಕಚೇರಿಗಳು ಮತ್ತು ವ್ಯಾಪ್ತಿಗೆ ಬರುವ ಎಲ್ಲಾ ಮತಗಟ್ಟೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ್ ಮೀನಾ ತಿಳಿಸಿದರು.

ಇಂದು ನೂತನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 27 ರಂದು ಪ್ರಕಟಿಸಲಾಗಿದ್ದು, ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಅಕ್ಟೋಬರ್ 27, 2023 ರಿಂದ ಡಿಸೆಂಬರ್ 09, 2023ರ ವರೆಗೆ ಸಲ್ಲಿಸಬಹುದು.  ವಿಶೇಷ ಅಭಿಯಾನದ ನವೆಂಬರ್ 18, 19 ಡಿಸೆಂಬರ್ 02 ಮತ್ತು 03ರ ಶನಿವಾರ ಮತ್ತು ಭಾನುವಾರಗಳಂದು ಹಮ್ಮಿಕೊಳ್ಳಲಾಗಿದೆ.  ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿಸೆಂಬರ್ 26 ರಂದು ಹಾಗೂ 05ನೇ ಜನವರಿ 2024 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.
ವಿಧಾನಸಭಾ ಕ್ಷೇತ್ರದ ಕರಡು ಮತದಾರರ ಪಟ್ಟಿಗಳನ್ನು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಅಧಿಕೃತ ವೆಬ್‍ಸೈಟ್ https://ceo.karnataka.gov.in/en  ನಲ್ಲಿ ಪಿಡಿಎಫ್ ಸ್ವರೂಪಗಳಲ್ಲಿ ಪ್ರಕಟಿಸಲಾಗಿರುತ್ತದೆ.  ಸಾರ್ವಜನಿಕರು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ  ತಮ್ಮ ಹೆಸರನ್ನು ಸೇರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.

ಅರ್ಜಿಗಳನ್ನು ಸಲ್ಲಿಸುವ ವಿಧಾನ:

ಪ್ರತಿ ವಿಧಾನಸಭಾ ಕ್ಷೇತ್ರದ ಅಧಿಸೂಚಿತ ನೋಂದಣಾಧಿಕಾರಿ/ಸಹಾಯಕ ನೋಂದಣಾಧಿಕಾರಿಗೆ ನಿಗದಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.  ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಅರ್ಜಿ ನಮೂನೆ – 6.  ಸಾಗರೋತ್ತರ ಭಾರತೀಯ ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸಲು ಅರ್ಜಿ ನಮೂನೆ – 6ಎ  ಮತದಾರರ ಪಟ್ಟಿಯಲ್ಲಿನ ವಿವರಗಳ ದೃಢೀಕರಣದ ಉದ್ದೇಶಕ್ಕಾಗಿ ಆಧಾರ್ ಸಂಖ್ಯೆಯ ಅಥವಾ ಇತರೆ 11 ದಾಖಲೆಗಳ ಮಾಹಿತಿ ಪತ್ರ ನಮೂನೆ – 6ಬಿ.  ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿ ಪ್ರಸ್ತಾಪಿತ ಸೇರ್ಪಡೆಯ ಆಕ್ಷೇಪಣೆಗಾಗಿ ಹೆಸರು ಅಳಿಸುವಿಕೆಗೆ ಅರ್ಜಿ ನಮೂನೆ – 7. ವಿಳಾಸವನ್ನು ಬದಲಾಯಿಸಲು / ಅಸ್ತಿತ್ವದಲ್ಲಿರುವ ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿ / ಬದಲಿ ಮತದಾರರ ಗುರುತಿನ ಚೀಟಿಗಾಗಿ / ವಿಕಲ ಚೇತನ ಮತದಾರರನ್ನು ಗುರುತು ಮಾಡಲು ಅರ್ಜಿ ನಮೂನೆ – 8 ನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಸಾರ್ವಜನಿಕರು ಅರ್ಜಿಗಳನ್ನು ಮತದಾರರ ಸೇವಾ ಪೋರ್ಟಲ್ https://voters.eci.gov.in  ಅಥವಾ ವೋಟರ್ ಹೆಲ್ಪ್‍ಲೈನ್ ಮೊಬೈಲ್ ಅಪ್ಲಿಕೇಶನ್ ಬಳಸಿ ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.  

 2023ರ ಪ್ರಕಾರ ಒಟ್ಟ್ಯು ಸಾಮಾನ್ಯ  ಮತದಾರರ ಸಂಖ್ಯೆ 5,08,53,845. ಅದರಲ್ಲಿ ಪುರುಷ ಮತದಾರರು 2,56,39,736. ಮಹಿಳಾ ಮತದಾರರು 2,52,09,619.  ಇತರೆ 4,490.  ಕರಡು ಮತದಾರರ ಪಟ್ಟಿ – 2024ರ ಪ್ರಕಾರ ಒಟ್ಟು ಸಾಮಾನ್ಯ ಮತದಾರರ ಸಂಖ್ಯೆ 5,33,77,162 ಅದರಲ್ಲಿ ಪುರುಷ ಮತದಾರರ ಸಂಖ್ಯೆ 2,68,02,838, ಮಹಿಳಾ ಮತದಾರರ ಸಂಖ್ಯೆ 2,65,69,428, ಇತರೆ ಮತದಾರರು 4,896 ಹಾಗೂ 47,172 ಸೇವಾ ಮತದಾರರಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿ ವಿಧಾನಸಭಾ ಕ್ಷೇತ್ರದ ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಿಸಲು ಮತ್ತು ಎಲ್ಲಾ ಅರ್ಹ ಮತದಾರರನ್ನು ನೋಂದಾಯಿಸಲು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸೂಚಿಸಿದೆ.
ಎಲ್ಲಾ ಅರ್ಹ ಮತದಾರರನ್ನು ಮತದಾರರ ಮಟ್ಟಿಯಲ್ಲಿ ನೋಂದಾಯಿಸಲು ಮತ್ತು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ದೋಷ ಮುಕ್ತ ಮತದಾರರ ಪಟ್ಟಿಯನ್ನು ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ.  ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮೇಲಿನ ವೇಳಾ ಪಟ್ಟಿಯ ಪ್ರಕಾರ ಹಕ್ಕುಗಳು ಮತ್ತು ಆಕ್ಷೇಪಣೆಗಳ ಅವಧಿಯಲ್ಲಿ ಸಂಬಂಧಿತ ನಮೂನೆಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ವ್ಯಾಪಕ ಪ್ರಚಾರವನ್ನು ನೀಡಲು ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹ ಮತದಾರರು ತಮ್ಮ ಮೊಬೈಲ್ ಪೋನ್‍ನಲ್ಲಿ ವೋಟರ್ ಹೆಲ್ಪ್‍ಲೈನ್ ಆ್ಯಪ್‍ನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು. ಅರ್ಜಿಗಳನ್ನು https://voterportal.eci.gov.in/ ಪೋರ್ಟಲ್‍ನಲ್ಲಿಯೂ ಸಹ ಸಲ್ಲಿಸಬಹುದು.
ಮತದಾರರ ಪಟ್ಟಿ, ಮತದಾರರ ಭಾವಚಿತ್ರ ಗುರುತಿನ ಚೀಟಿ ಮತ್ತು ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಮತದಾನದ ದಿನದಂದು ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳನ್ನು ಕೈಗೊಳ್ಳಲು ಯಾವುದೇ ಅವಕಾಶವಿರುವುದಿಲ್ಲ.  ಆದ್ದರಿಂದ ಮತದಾರರ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಕೂಡಲೇ ಪರಿಶೀಲಿಸಿಕೊಳ್ಳಬೇಕೆಂದು ಸೂಚಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಆರ್.ವೆಂಕಟೇಶ್ ಕುಮಾರ್, ಹಾಗೂ ಎಂ.ಕೂರ್ಮಾ ರಾವ್ ಉಪಸ್ಥಿತರಿದ್ದರು.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!