Site icon MOODANA Web Edition

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಸದಸ್ಯರು (ಕಾನೂನು) ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಅಹ್ವಾನ

ಬೆಂಗಳೂರು, ನವೆಂಬರ್ 07 (ಕರ್ನಾಟಕ ವಾರ್ತೆ) :

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದ ಸದಸ್ಯರು (ಕಾನೂನು) ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತಾ ಮಾನದಂಡಗಳು, ಅರ್ಜಿ ನಮೂನೆ-1 ಹಾಗೂ ಇತರೆ ಮಾಹಿತಿಗಳನ್ನು ಇಂಧನ ಇಲಾಖೆಯ https://energy.karnataka.gov.in ರಲ್ಲಿ ಪಡೆಯಬಹುದಾಗಿದೆ.

ಅರ್ಜಿಗಳನ್ನು ಡಿಸೆಂಬರ್ 12 ರ ಸಂಜೆ 5.30 ರೊಳಗಾಗಿ ಭೌತಿಕವಾಗಿ ಅಥವಾ ಸ್ಕ್ಯಾನ್ ದಾಖಲೆಗಳನ್ನು ಅರ್ಜಿಯೊಂದಿಗೆ ಇ-ಮೇಲ್ : prs.energy@gmail.com  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ, ಕೊಠಡಿ ಸಂಖ್ಯೆ: 236, 2ನೇ ಮಹಡಿ, ವಿಕಾಸ ಸೌಧ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು-560 001 ಇವರಿಗೆ ಸಲ್ಲಿಸುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಇಂಧನ ಇಲಾಖೆ ಮತ್ತು ಸಂಚಾಲಕರು, ಆಯ್ಕೆ ಸಮಿತಿ ಇವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version