ಬೆಂಗಳೂರು, ನವೆಂಬರ್ 07 (ಕರ್ನಾಟಕ ವಾರ್ತೆ) :
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನವೆಂಬರ್ 09 ರಂದು ಸಂಜೆ 5.00 ಗಂಟೆಗೆ ಕರ್ನಾಟಕ ಉಚ್ಚನ್ಯಾಯಾಲಯದ ಪ್ರಧಾನ ಪೋಷಕರ ಸಭಾಂಗಣದಲ್ಲಿ “ಕಾನೂನು ಸೇವೆಗಳ ದಿನಾಚರಣೆ”ಯನ್ನು ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಉಚ್ಛ ನ್ಯಾಯಲಯದ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಧಾನ ಪೋಷಕರಾದ ಗೌರವಾನ್ವಿತ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಛನ್ಯಾಯಾಲದ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ಕರ್ನಾಟಕ ಉಚ್ಛನ್ಯಾಯಾಲದ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ. ಸೋಮಶೇಖರ್ ಸೇರಿದಂತೆ ನ್ಯಾಯಮೂರ್ತಿಗಳು, ಗಣ್ಯರು ಉಪಸ್ಥಿತರಿರುವರು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.