ಹುಬ್ಬಳ್ಳಿ ( ಕರ್ನಾಟಕ ವಾರ್ತೆ ) ನ.7: ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಮಿನಿ ಉದ್ಯೋಗ ಮೇಳವನ್ನು ನವೆಂಬರ್ 10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ 6 ಖಾಸಗಿ ವಲಯದ ಉದ್ಯೋಗದಾತರುಗಳು ಭಾಗವಹಿಸಿ, ಸಂಸ್ಥೆಗಳಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿಕಾಂ, ಡಿ.ಎಡ್, ಬಿ.ಎಡ್, ಬಿ.ಇ(ಸಿ.ಎಸ್) ಹೊಂದಿದ 18 ರಿಂದ 30 ವಯೋಮಿತಿಯ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. https://forms.gle/scApbYhsnZiNxk1W7 ವೆಬ್ ಸೈಟ್ ಮೂಲಕ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ ಕಾರ್ಡ, ಬಯೋಡಾಟಾಗಳ ಹೆಚ್ಚಿನ ಪ್ರತಿಗಳೊಂದಿಗೆ (ಕನಿಷ್ಟ 5 ಪ್ರತಿಗಳು) ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕುವೆಂಪು ರಸ್ತೆ ನವನಗರ ಹುಬ್ಬಳ್ಳಿ ಅಥವಾ ದೂರವಾಣಿ ಸಂಖ್ಯೆ 0836-2225288, 9806905751, 9845826523 ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

LEAVE A REPLY

Please enter your comment!
Please enter your name here