Site icon MOODANA Web Edition

ನ.9ಕ್ಕೆ ಮಹಾನಗರ ಪಾಲಿಕೆಯ ಲೆಕ್ಕಗಳ ಸ್ಥಾಯಿ ಸಮಿತಿಯ ಅಧ್ಯಕ್ಷರ ಚುನಾವಣೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.6: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ಲೆಕ್ಕಗಳ ಸ್ಥಾಯಿ ಸಮಿತಿಯ ಅಧ್ಯಕ್ಷರ ಚುನಾವಣೆಯು ನವೆಂಬರ್ 09 ರಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಜರುಗಲಿದೆ.
ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಚುನಾವಣೆಗಾಗಿ ನಾಮಪತ್ರಗಳನ್ನು ವಿತರಿಸುವುದು. ಬೆಳಿಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸುವುದು. ಬೆಳಿಗ್ಗೆ 11 ಗಂಟೆಗೆ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗುವುದು. ಬೆಳಿಗ್ಗೆ 11 ಗಂಟೆಯ ನಂತರ ನಾಮಪತ್ರ ಪರಿಶೀಲನೆ, ನಾಮಪತ್ರಗಳ ವಿವರಗಳನ್ನು ಓದುವುದು, ನಾಮನಿರ್ದೇಶನ ಪತ್ರಗಳನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಶ್ಯವಿದ್ದಲ್ಲಿ ಮತದಾನ, ಮತಗಳ ಏಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆ ಜರುಗುವುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಮಿತಿ ಕಾರ್ಯದರ್ಶಿಗಳು ಪಕ್ರಟಣೆಯಲ್ಲಿ ತಿಳಿಸಿದ್ದಾರೆ.

Exit mobile version