Site icon MOODANA Web Edition

ಮಾನವೀಯ ಸೇವೆ ಮಾಡುವವರೇ ನಮಗೆ ಸ್ಫೂರ್ತಿ: ರಾಜ್ಯಪಾಲರು

ಬೆಂಗಳೂರು, ನವೆಂಬರ್ 07 (ಕರ್ನಾಟಕ ವಾರ್ತೆ) :

ಧರ್ಮ, ಸಂಸ್ಕøತಿ ಮತ್ತು ಪರೋಪಕಾರದ ಸರಿಯಾದ ಮಾರ್ಗವನ್ನು ಅನುಸರಿಸಿ ಮತ್ತು “ಸರ್ವೇ ಭವಂತು ಸುಖಿನಃ ಸರ್ವೇ ಸಂತು ನಿರಾಮಯಾಃ” ಎಂಬ ಮನೋಭಾವದಿಂದ ಮಾನವ ಸೇವೆ, ಸಮಾಜ ಸೇವೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯಲ್ಲಿ ಕೆಲಸ ಮಾಡುವವರು ನಮ್ಮೆಲರಿಗೂ ನಿರಂತರವಾಗಿ ಸ್ಫೂರ್ತಿ ನೀಡುತ್ತಿರುತ್ತಾರೆ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಇಂಟರಾಕ್ಟಿವ್ ಫೆÇೀರಮ್ ಆನ್ ಇಂಡಿಯನ್ ಎಕಾನಮಿ ಆಯೋಜಿಸಿದ್ದ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಸ್ಥಾನ, ಪ್ರತಿμÉ್ಠ ಅಥವಾ ದುರಾಸೆಯನ್ನು ಬಯಸದೆ ಇತರರ ಹಿತಾಸಕ್ತಿಗಳನ್ನು ನೋಡಿಕೊಳ್ಳುವ ಮತ್ತು ಇತರರನ್ನು ಗೌರವಿಸುವ ವ್ಯಕ್ತಿ ಉತ್ತಮ ಸಮಾಜ ನಿರ್ಮಾಣಕ್ಕೆ ಸ್ಫೂರ್ತಿಯಾಗುತ್ತಾರೆ. ನಮ್ಮ ದೇಶದಲ್ಲಿ ಅನೇಕ ಮಹಾನ್ ವ್ಯಕ್ತಿಗಳು ತಮ್ಮ ಸಂಪತ್ತು ಮತ್ತು ವೈಭವವನ್ನು ತ್ಯಾಗ ಮಾಡಿದ್ದಾರೆ ಮತ್ತು ದೇಶ, ಸಮಾಜದ ಕಲ್ಯಾಣಕ್ಕಾಗಿ ಮತ್ತು ಧರ್ಮ ಮತ್ತು ಸಂಸ್ಕೃತಿಯನ್ನು ಬಲಪಡಿಸಲು ಸೇವೆಯನ್ನು ಮಾಡುತ್ತಿದ್ದಾರೆ. ಅಂತಹ ಮಹಾನ್ ವ್ಯಕ್ತಿಗಳಿಂದ ಪ್ರೇರಣೆ ಪಡೆದು ಮಾನವ ಸೇವೆ, ಸಮಾಜ ಸೇವೆ ಮತ್ತು ದೇಶ ಸೇವೆಯ ಕೆಲಸವನ್ನು ಪರೋಪಕಾರದ ಮನೋಭಾವದಿಂದ ಮಾಡಬೇಕು ಎಂದು ಕರೆ ನೀಡಿದರು.

ಈ ಸಮಾರಂಭದಲ್ಲಿ ಆಯ್ಕೆಯಾದ ಗಣ್ಯರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿ ನೀಡಿ ಗೌರವಿಸಿರುವುದು ಸಂತಸದ ವಿಷಯ. ಬದಲಾವಣೆಯು ಪ್ರಕೃತಿಯ ನಿಯಮವಾಗಿದೆ ಮತ್ತು ಸಕಾರಾತ್ಮಕ ಬೆಳವಣಿಗೆಗಾಗಿ ಬದಲಾವಣೆಯು ಸಂಭವಿಸುತ್ತಲೇ ಇರಬೇಕು. ತಮ್ಮ ಪ್ರಯತ್ನದ ಮೂಲಕ ಸಮಾಜದಲ್ಲಿ ಮಹತ್ವದ ಬದಲಾವಣೆಗಳನ್ನು ತರುವಲ್ಲಿ ಯಶಸ್ವಿಯಾದ ಕರ್ನಾಟಕದ ಮಹಾನ್ ವ್ಯಕ್ತಿಗಳನ್ನು ಗೌರವಿಸುವ ಅವಕಾಶ ನನಗೆ ಸಿಕ್ಕಿದೆ. ಈ ಮಹನೀಯರನ್ನು ಅಭಿನಂದಿಸುತ್ತೇನೆ ಹಾಗೂ ನೀವು ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತದೃಷ್ಟಿಯಿಂದ ಕೆಲಸ ಮಾಡುವುದನ್ನು ಮುಂದುವರೆಸಬೇಕು ಎಂದು ಆಶಿಸುತ್ತೇನೆ ಎಂದರು.

ಇಂಟರಾಕ್ಟಿವ್ ಫೆÇೀರಮ್ ಆನ್ ಇಂಡಿಯನ್ ಎಕಾನಮಿ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಲಾಭೋದ್ದೇಶವಿಲ್ಲದ ಸಂಸ್ಥೆಯಾಗಿದ್ದು, ಮಹಾತ್ಮ ಗಾಂಧಿಯವರ ಮೌಲ್ಯಗಳನ್ನು ಪ್ರಚಾರ ಮಾಡಲು ಮತ್ತು 115 ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನು ಒಳಗೊಂಡಂತೆ ಗ್ರಾಮೀಣ ಭಾರತದ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ಮೀಸಲಾಗಿರುತ್ತದೆ. 2011 ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರುವ ವ್ಯಕ್ತಿಗಳನ್ನು ಗೌರವಿಸಲು ಭಾರತದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಪ್ರತಿ ವರ್ಷ ಚಾಂಪಿಯನ್ಸ್ ಆಫ್ ಚೇಂಜ್ ಪ್ರಶಸ್ತಿಗಳನ್ನು ನೀಡುವಲ್ಲಿ ಶ್ಲಾಘನೀಯ ಕೆಲಸವನ್ನು ಮಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣ , ಚಾಂಪಿಯನ್ಸ್ ಆಫ್ ಚೇಂಜ್ ಅವಾರ್ಡ್ ಸಂಸ್ಥಾಪಕ ನಂದನ್ ಝಾ, ಚಾಂಪಿಯನ್ಸ್ ಆಫ್ ಚೇಂಜ್ ಪ್ರಶಸ್ತಿಗಳ ಪೆÇೀಷಕ ಶ್ಯಾಮ್ ಜಾಜು ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Exit mobile version