ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.7: ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನ ರಾಜ್ಯ ಮತ್ತು ಗೋವಾ ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿ ಪಡೆಯುತ್ತಿರುವವರು ತಮ್ಮ ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್ ಮತ್ತು ಮೊಬೈಲ್ ನಂಬರ ಸೇರಿದಂತೆ ಇತರೆ ದಾಖಲೆಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ ಅಥವಾ ತಹಸೀಲ್ದಾರ ಕಾರ್ಯಾಲಯಕ್ಕೆ ಸಲ್ಲಿಸಬೇಕು. ದಾಖಲೆಗಳನ್ನು ಹಾಜರುಪಡಿಸದೇ ಇದ್ದಲ್ಲಿ ಅಂತವರ ಪಿಂಚಣಿಯನ್ನು ಸ್ಥಗಿತಗೊಳಿಸಲಾಗುವುದು ಎಂದು ಹುಬ್ಬಳ್ಳಿ ಶಹರ ತಹಸೀಲ್ದಾರರಾದ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.