ಬೆಂಗಳೂರು, ನವೆಂಬರ್ 09 (ಕರ್ನಾಟಕ ವಾರ್ತೆ):
ಕಾರ್ಮಿಕ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನವೆಂಬರ್ 9 ರಂದು ಬೆಳಿಗ್ಗೆ 10.30 ಗಂಟೆಗೆ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಕ್ಕಳಿಗೆ 2022-23ನೇ ಸಾಲಿನ ಶೈಕ್ಷಣಿಕ ಧನಸಹಾಯ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಹಣಕಾಸು ಮತ್ತು ಕಾಪೆರ್Çೀರೆಟ್ ವ್ಯಾಪಾರಗಳ ಸಚಿವೆ ನಿರ್ಮಲಾ ಸೀತಾರಾಮ್ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್.ಹೊರಟ್ಟಿ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಮತ್ತು ಕಾರ್ಮಿಕ ಸಚಿವ ಸಂತೋಪ್ ಲಾಡ್ ಸಮಾರಂಭದ ಘನ ಉಪಸ್ಥಿತಿ ವಹಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.