ಹುಬ್ಬಳ್ಳಿ ನ.7: ಓಡಿಶಾ ರಾಜ್ಯದ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನವೆಂಬರ್ 15 ರಿಂದ ನಡೆಯಲಿರುವ 2023-24ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ರಾಷ್ಟçಮಟ್ಟದ ಹಾಕಿ ಪಂದ್ಯಾವಳಿಗೆ ಹೊಸೂರಿನ ಸರಕಾರಿ ಪ್ರೌಢಶಾಲೆಯ ಪ್ರಥಮ ದರ್ಜೆ ಸಹಾಯಕರಾದ ಸಂಭಾಜಿ ಎನ್ ಶಿಂಧೆ ಅವರು ಆಯ್ಕೆಯಾಗಿದ್ದಾರೆ.
ಹಾಕಿ ತಂಡಕ್ಕೆ ಆಯ್ಕೆಯಾದ ಸಂಭಾಜಿ ಶಿಂಧೆಯವರಿಗೆ ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಚನ್ನಪ್ಪಗೌಡ, ಶಾಲಾ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು, ಹೊಸೂರಿನ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರ ವೃಂದ ಹಾಗೂ ಎಸ್.ಡಿ.ಎಮ್.ಸಿ. ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.