17.6 C
Karnataka
Thursday, February 6, 2025
spot_img

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಪಾಲಿಕೆಯ ವಿವಿಧ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ; ನ.೨೨ ಮತ್ತು ೨೩ ರಂದು ನೇರ ಸಂದರ್ಶನ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.೦೯: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ವೈದ್ಯರು, ಎ.ಮ್.ಬಿ.ಬಿ.ಎಸ್. ವೈದ್ಯರು ಹಾಗೂ ಸಾಮಾನ್ಯ ವೈದ್ಯರು, ಅರವಳಿಕೆ ತಜ್ಞರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗಳು, ಎಲ್.ಡಿ.ಸಿ., ಡೇಸ್ಟರ್, ವಾರ್ಡಬಾಯ್, ಆಯಾ ಮತ್ತು ಅಂಬ್ಯೂಲೆನ್ಸ್ ವಾಹನ ಚಾಲಕರುಗಳ ಹುದ್ದೆಗೆ ಮಾಸಿಕ ಗೌರವಧನ ಆಧಾರದ ಮೇಲೆ ಹನ್ನೊಂದು ತಿಂಗಳ ಅವಧಿಗೆ ಸೇವೆಯನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಿವಿಧ ಆಸ್ಪತ್ರೆಗಳಲ್ಲಿ ಅವಶ್ಯಕತೆಗನುಗುಣವಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರು ಎಮ್.ಬಿ.ಬಿ.ಎಸ್. ಸಾಮಾನ್ಯ ವೈದ್ಯರು, ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗಳನ್ನು ಹನ್ನೊಂದು ತಿಂಗಳ ಅವಧಿಗೆ ಮಾಸಿಕ ಗೌರವಧನ ಆಧಾರದ ಮೇಲೆ ಸೇವೆಯನ್ನು ಪಡೆದುಕೊಳ್ಳಲು ಉದ್ದೇಶಿಸಲಾಗಿದೆ.

ಈ ಹುದ್ದೆಗಳಿಗೆ ಸಂಬAಧಪಟ್ಟ ವಿದ್ಯಾರ್ಹತೆ ಹೊಂದಿದ ಆಸಕ್ತಿವುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಹಾಗೂ ದೃಡೀಕೃತ ಸರ್ಟಿಫಿಕೇಟಗಳೊಂದಿಗೆ ನವೆಂಬರ್ ೭ ರಿಂದ ೧೮, ೨೦೨೩ ರವರೆಗೆ ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಹು.ಧಾ.ಮ.ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆ ಆಡಳಿತ ಕಛೇರಿ ನಂ.೧೪ರಲ್ಲಿ ದ್ವಿತೀಯ ದರ್ಜೆ ಸಹಾಯಕರ ಹತ್ತಿರ ಹೆಸರು ನೊಂದಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನಕ್ಕೆ ಆಹ್ವಾನಿಸಲಾಗುವುದು. ನವೆಂಬರ್ ೨೨, ೨೦೨೩ ರಂದು ವೈದ್ಯರು ಮತ್ತು ಅರೇ ವೈದ್ಯಕೀಯ ಸಿಬ್ಬಂದಿಗಳಿಗೆ ಮತ್ತು ನವೆಂಬರ್ ೨೩, ೨೦೨೩ ರಂದು ಎಲ್.ಡಿ.ಸಿ., ಡೇಸ್ಸರ್, ವಾರ್ಡಬಾಯ್, ಆಯಾ ಮತ್ತು ಅಂಬ್ಯೂಲೆನ್ಸ್ ವಾಹನ ಚಾಲಕರಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದೆ.
ಹೆಚ್ಚಿನ ವಿವರಗಳನ್ನು www.hdmc.mrc.gov.in ವೆಬ್‌ಸೈಟನಲ್ಲಿ ಪಡೆದುಕೊಳ್ಳಬಹುದು ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!