ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.೧೦: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ೭೨-ಹುಬ್ಬಳ್ಳಿ- ಧಾರವಾಡ ಪೂರ್ವ, ೭೩-ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಹಾಗೂ ೭೪-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬAಧಪಟ್ಟAತೆ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಅವರ ನಿರ್ದೇಶನದನ್ವಯ ಅಕ್ಟೋಬರ್ ೨೭ರಂದು ಪ್ರಕಟಿಸಿಲಾಗಿದೆ.
ಕರಡು ಮತದಾರರ ಪಟ್ಟಿಯನ್ನು ಪ್ರತಿಯೊಬ್ಬ ಮತದಾರರು ಪರಿಶೀಲಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನಮೂದು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರು ನಮೂದು ಇದ್ದು ಆ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಕೂಡಲೇ ಹೆಸರು ಸೇರ್ಪಡೆ ಮಾಡಿಕೊಳ್ಳಲು, ಮತದಾರರ ಪಟ್ಟಿಯಿಂದ ಕೈ ಬಿಡಲು ಹಾಗೂ ವರ್ಗಾವಣೆ/ತಿದ್ದುಪಡಿಗೆ ಡಿಸೆಂಬರ್ ೯ ರವರೆಗೆ ಅವಕಾಶವಿದ್ದು, ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಮತ್ತು www.nvsp.in ಮೂಲಕ ಅವಶ್ಯಕ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ ತಮ್ಮ ಹೆಸರು ಸೇರ್ಪಡೆ, ವರ್ಗಾವಣೆ/ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
೨೦೦೫ ಮತ್ತು ೨೦೦೬ನೇ ಇಸ್ವಿಯಲ್ಲಿ ಜನನರಾದ ಯುವ ಮತದಾರರಿಗೆ ಕೂಡ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶವಿದೆ. ಈ ಬಗ್ಗೆ ಸಂಬAಧಪಟ್ಟ ತಮ್ಮ ಭಾಗದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಓ)/ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಗೆ ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ www.nvsp.in ಮತ್ತು ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲನೆ ಮತ್ತು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಸರು ಸೇರ್ಪಡೆ ಮಾಡಿಕೊಳ್ಳಲು, ಮತದಾರರ ಪಟ್ಟಿಯಿಂದ ಕೈಬಿಡಲು ಹಾಗೂ ವರ್ಗಾವಣೆ/ತಿದ್ದುಪಡಿಗೆ ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಅವರ ನಿರ್ದೇಶನದನ್ವಯ ನವೆಂಬರ್ ೧೮ ಮತ್ತು ಮತ್ತು ೧೯ ಹಾಗೂ ಡಿಸೆಂಬರ್ ೨ ಮತ್ತು ೩ ರಂದು ವಿಶೇಷ ಅಭಿಯಾನವನ್ನು ಜರುಗಿಸಲಾಗುವುದು. ೭೨-ಹುಬ್ಬಳ್ಳಿ-ಧಾರವಾಡ ಪೂರ್ವ, ೭೩- ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಹಾಗೂ ೭೪-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬAಧಪಟ್ಟ ಎಲ್ಲ ಮತದಾರರು ಈ ದಿನಗಳಂದು ಆಯಾ ಮತಗಟ್ಟೆಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಲ್ಲಿ ಲಭ್ಯವಿದ್ದು, ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮತದಾರರ ನೊಂದಣಾಧಿಕಾರಿಗಳು ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.