ಬೆಂಗಳೂರು, ನವೆಂಬರ್ 20 (ಕರ್ನಾಟಕ ವಾರ್ತೆ) :
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದ್ದು, ನವೆಂಬರ್ 20 ರಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ಮಾದವಾರದಿಂದ ನೈಸ್ ರಸ್ತೆಯ ಮೂಲಕ ಎಲೆಕ್ಟ್ರಾನಿಕ್‍ಸಿಟಿಗೆ ಬಿ.ಎಂ.ಟಿ.ಸಿ. ಬಸ್ ಸೌಲಭ್ಯವನ್ನು ಕಲ್ಪಿಸಿದೆ. ಪ್ರಯಾಣಿಕರು ಈ ಸದಾವಕಾಶವನ್ನು ಬಳಸಿಕೊಳ್ಳುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.