Site icon MOODANA Web Edition

ನ.22 ರಿಂದ 24ರವರೆಗೆ ಪೊಲೀಸ್ ವಾರ್ಷಿಕ ಕ್ರೀಡಾಕೂಟ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.20: ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯ ಘಟಕದ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ನವೆಂಬರ್ 22 ರಿಂದ 24 ರವರೆಗೆ ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ನಡೆಯಲಿದೆ.
ನವೆಂಬರ್ 22 ರಂದು ಬೆಳಿಗ್ಗೆ 8.30 ಗಂಟೆಗೆ ಕ್ರೀಡಾಕೂಟವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಜಿ. ಶಾಂತಿ ಅವರು ಉದ್ಘಾಟಿಸುವರು. ನವೆಂಬರ್ 24 ರಂದು ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಭರತ್ ಎಸ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಬಹುಮಾನ ವಿತರಿಸುವರು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತೆಯರಾದ ರೇಣುಕಾ ಕೆ.ಸುಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version