ಬೆಂಗಳೂರು, ನವೆಂಬರ್ 21 (ಕರ್ನಾಟಕ ವಾರ್ತೆ) :
ರಾಜ್ಯದಲ್ಲಿ ಪ್ರಮುಖ ಕಾಮಗಾರಿಗಳನ್ನು ನಡೆಸುವ ಇಲಾಖೆಗಳಲ್ಲಿ ನಡೆಯುತ್ತಿರುವ ಪ್ಯಾಕೇಜ್ ಪದ್ಧತಿ, ಬಾಕಿ ಮೊತ್ತ ಬಿಡುಗಡೆ ಮತ್ತು ಟೆಂಡರ್ ಪ್ರಕ್ರಿಯೆ, ಇತ್ಯಾದಿಗಳಲ್ಲಿ ಶೇಕಡ 40 ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಲಂಚಗುಳಿತನ / ಭ್ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ ಅಸೋಸಿಯೇಷನ್, ಬೆಂಗಳೂರು ಇವರು ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ, ಆರೋಪಗಳ ಕುರಿತು ತನಿಖೆಯನ್ನು ನಡೆಸಲು ರಚಿಸಲಾಗಿರುವ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ರವರ ನೇತೃತ್ವದಲ್ಲಿ ವಿಚಾರಣಾ ಆಯೋಗವು ನೇಮಿಸಿದ್ದು, ದಿನಾಂಕ 26.07.2019 ರಿಂದ 31-03-2023 ರ ಅವಧಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ತನಿಖೆ ನಡೆಸುತ್ತಿದೆ.
ಸಾರ್ವಜನಿಕರು ಯಾವುದೇ ರೀತಿಯ ಸಲಹೆ / ಆಕ್ಷೇಪಣೆ / ಅಹವಾಲು ಹೇಳಿಕೆಗಳು / ದಾಖಲೆಗಳು ಇದ್ದರೆ ಸಲ್ಲಿಸಲು ನವೆಂಬರ್ 29ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಮಾಹಿತಿಯನ್ನು ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್, ವಿಚಾರಣಾ ಆಯೋಗ, 3ನೇ ಮಹಡಿ – ಲೋಕೋಪಯೋಗಿ ಇಲಾಖೆ ಮುಖ್ಯ ಕಟ್ಟಡ, ಕೆ.ಆರ್.ವೃತ್ತ,ಬೆಂಗಳೂರು 560001 ಕಛೇರಿಗೆ ಖುದ್ದಾಗಿ ಅಥವಾ ಅಂಚೆಯ ಮೂಲಕ ಅಥವಾ ಇ-ಮೇಲ್ justicenmdasinquirycommission@gmail.com ಮೂಲಕ ಸಲ್ಲಿಸಬೇಕು ಎಂದು ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.