Site icon MOODANA Web Edition

ಅಂಗವಿಕಲರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅವಶ್ಯ -ಗ್ರೇಸ್ ಮೇರಿ ಪ್ರಕಾಶ ಚೆನ್ನದಾಸರ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.22: ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡುವುದರಿಂದ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ಅಂಗವಿಕಲರು ತಪ್ಪದೇ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಅಂಚಟಗೇರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಗ್ರೇಸ್ ಮೇರಿ ಪ್ರಕಾಶ ಚೆನ್ನದಾಸರ ಹೇಳಿದರು.
ತಾಲೂಕಿನ ಅಂಚಟಗೇರಿ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರಿಗೆ ಏರ್ಪಡಿಸಿದ್ದ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಗವಿಕಲರಲ್ಲಿ ವಯಸ್ಸಾದಂತೆ ಕ್ರಮೇಣವಾಗಿ ಆರೋಗ್ಯದಲ್ಲಿ ಏರುಪೇರು ಆಗುವುದಲ್ಲದೇ, ಕೆಲವರಲ್ಲಿ ದೌರ್ಬಲ್ಯದಿಂದ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯತಿಯ ಅಧ್ಯಕ್ಷ ಮಂಜುನಾಥ ಗಾಣಿಗೇರ ಅವರು ಶಿಬಿರದ ಕುರಿತು ಮಾತನಾಡಿದರು. ತಾಲೂಕು ಪಂಚಾಯತ ವಿವಿಧೋದ್ದೇಶ ಕಾರ್ಯಕರ್ತ ಮಹಾಂತೇಶ ಕುರ್ತಕೋಟಿ, ಅಂಗವಿಕಲರ ಪುನರ್ವಸತಿ ಕಾರ್ಯಕರ್ತೆ ಮಲ್ಲಮ್ಮ ವಾಲ್ಮೀಕಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಶಿವಾನಂದ ಅರ್ಜಿ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮೀ ಮತ್ತಿಹಳ್ಳಿ, ಮಾದೇವಿ ಕೈನಡಗು, ಗ್ರಾಮ ಪಂಚಾಯತಿ ಸಿಬ್ಬಂದಿ, ಆರೋಗ್ಯ ಸಿಬ್ಬಂದಿ, ವಿಕಲಚೇತನರು ಇತರರು ಉಪಸ್ಥಿತರಿದ್ದರು.

Exit mobile version