Site icon MOODANA Web Edition

ಟಿಕೇಟ್ ಇಲ್ಲದೆ ಪ್ರಯಾಣಿಸಿದ 3,553 ಪ್ರಯಾಣಿಕರಿಗೆ ದಂಡ

ಬೆಂಗಳೂರು, ನವೆಂಬರ್ 22 (ಕರ್ನಾಟಕ ವಾರ್ತೆ) :

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಕ್ಟೋಬರ್ ಮಾಹೆಯಲ್ಲಿ ತಮ್ಮ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 47,779 ವಾಹನಗಳನ್ನು ತನಿಖೆಗೊಳಪಡಿಸಿ 3,501 ಪ್ರಕರಣಗಳನ್ನು ಪತ್ತೆಹಚ್ಚಿ, 3,553 ಟಿಕೇಟ್ ರಹಿತ ಪ್ರಯಾಣಿಕರಿಂದ 5,60,582 ರೂ.ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದ್ದಾರೆ.

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 92,472 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ಧ ತನಿಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ. ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್ / ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

Exit mobile version