ಬೆಂಗಳೂರು, ನವೆಂಬರ್ 22 (ಕರ್ನಾಟಕ ವಾರ್ತೆ) :
ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆ ಮತ್ತು Centre for law & Policy Research, ಬೆಂಗಳೂರು ಇವರ ಸಹಯೋಗದೊಂದಿಗೆ ಸಂವಿಧಾನ ದಿನಾಚರಣೆಯ ಅಂಗವಾಗಿ ಭಾರತ ಸಂವಿಧಾನ ರಚನೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಮತ್ತು ವಿವಿಧ ಸಂವಿಧಾನಾತ್ಮಕ ಆಲೋಚನೆಗಳು ಹಾಗೂ ಮೌಲ್ಯಗಳ ಬಗ್ಗೆ ರಾಷ್ಟ್ರ ಮಟ್ಟದ ರಸಪ್ರಶ್ನೆ ಕಾರ್ಯಕ್ರಮವನ್ನು ನವೆಂಬರ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ದ್ವಾರಕ ಆಡಿಟೋರಿಯಂ ಮೈನ್ ಗೇಟ್, ಎಂ.ಎಸ್.ರಾಮಯ್ಯ ಇನ್ಸಿಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂಎಸ್‍ಆರ್‍ಐಟಿ ಕ್ಯಾಂಪಸ್, ಎಂಎಸ್‍ಆರ್ ನಗರ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಡಿ ವಸತಿ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 10, 11 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.