ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.22: ನವೆಂಬರ್ 25 ರಂದು ಶ್ರೀ ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.