Site icon MOODANA Web Edition

ಪರಿಶಿಷ್ಟ ಜಾತಿಗೆ ಸೇರಿದ ಚರ್ಮ ಕುಶಲಕರ್ಮಿಗಳಿಂದ ವಿವಿಧ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ನ.22: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಕೌಶಲ್ಯ ಅಭಿವೃದ್ಧಿ ಮತ್ತು ಆದಾಯ ಗಳಿಕೆಗಾಗಿ 60 ದಿನಗಳ ತರಬೇತಿ, ವಸತಿ ಕಾರ್ಯಾಗಾರ ಯೋಜನೆ, ಸ್ವಾವಲಂಬಿ ಸಂಚಾರಿ ಮಾರಾಟ ಮಳಿಗೆ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಚರ್ಮಶಿಲ್ಪ ಯಂತ್ರಾಧಾರಿತ ಉತ್ಪಾದನಾ ಘಟಕ ಯೋಜನೆ ಹಾಗೂ ನೇರ ಸಾಲ ಯೋಜನೆಗಳಿಗೆ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ನವೆಂಬರ್ 20 ರಿಂದ ಡಿಸೆಂಬರ್ 19 ರೊಳಗಾಗಿ ಸೇವಾ ಸಿಂಧು ಪೆÇೀರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಸಿದ ನಂತರ ಅವಶ್ಯಕ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಜಿಲ್ಲಾ ಸಂಯೋಜಕರ ಕಛೇರಿ, ಮಳಿಗೆ ಸಂಖ್ಯೆ 209, ಐಟಿ ಪಾರ್ಕ್ ಕಟ್ಟಡ ಹುಬ್ಬಳ್ಳಿ ಕಛೇರಿಗೆ ನಾಲ್ಕು ದಿನಗಳೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 0836-2252053 ಕಛೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಲಿಡಕರ್ ಮಾರಾಟ ಮಳಿಗೆಯ ವ್ಯವಸ್ಥಾಪಕರಾದ ವಿ.ಪಿ.ಮೊರಬ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version