ಬೆಂಗಳೂರು, ನವೆಂಬರ್ 22 (ಕರ್ನಾಟಕ ವಾರ್ತೆ) :
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕನಿಷ್ಟ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 7 ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.kannadasiri.karnataka.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.