ಬೆಂಗಳೂರು, ನವೆಂಬರ್ 23 (ಕರ್ನಾಟಕ ವಾರ್ತೆ):
ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿಯಲ್ಲಿ ಉಳಿದಿರುವ ಸೀಟುಗಳಿಗೆ ಎರಡನೇ ಸುತ್ತಿನ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಸ್ನಾತಕೋತ್ತರ ವಿಭಾಗಕ್ಕೆ ನವೆಂಬರ್ 26 ರವರೆಗೆ ಸಲ್ಲಿಸಬಹುದು. ದಂಡ ಶುಲ್ಕ ಸಹಿತ ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನಾಂಕವಾಗಿದೆ. ನವೆಂಬರ್ 29 ರಂದು ಅರ್ಹತಾ ಪಟ್ಟಿ ಮತ್ತು ಸಮಾಲೋಚನೆ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಅರ್ಹತೆ, ಸೀಟ್ ಮ್ಯಾಟ್ರಿಕ್ಸ್ ಮತ್ತು ಕೋರ್ಸುಗಳ ಶುಲ್ಕದ ಮಾಹಿತಿಗೆ ಬೆಂಗಳೂರು ನÀಗರÀ ವಿಶ್ವವಿದ್ಯಾನಿಲಯದ ಜಾಲತಾಣ: http://bcu.ac.in ನ್ನು ಸಂಪರ್ಕಿಸಬಹುದಾಗಿದೆ ಎಂದು ನಗರ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.