Site icon MOODANA Web Edition

ನ.26 ರಂದು ಸಾರಿಗೆ ಇಲಾಖೆ ವತಿಯಿಂದ ವಾಯು ಮಾಲಿನ್ಯ ಜಾಗೃತಿ ಮಾಸಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಫರ್ಧೆ ಆಯೋಜನೆ

ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ನ.24: ವಾಯು ಮಾಲಿನ್ಯದಿಂದ ಪರಿಸರದ ಮೇಲೆ ಮತ್ತು ಮಾನವ ಜನಾಂಗದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ವಾಯು ಮಾಲಿನ್ಯವನ್ನು ತಡೆಗಟ್ಟಲು ಅನುಸರಿಸಬೇಕಿರುವ ಕ್ರಮಗಳ ಕುರಿತಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತಂತೆ ಪ್ರತಿ ವರ್ಷ ನವೆಂಬರ್ ಮಾಹೆಯನ್ನು ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಅದರಂತೆ ಸಾರಿಗೆ ಇಲಾಖೆ ಹಾಗೂ ಕೆ.ಎಲ್.ಇ. ಟೆಕ್ನಾಲಾಜಿಕಲ್ ಯೂನಿವರ್ಸಿಟಿಯ ಸ್ಟೂಡೆಂಟ್ ವೆಲಫೇರ್ ವಿಭಾಗದ ಸಹಯೋಗದೊಂದಿಗೆ ಕಲಾದೇವಿ ಎಂಬ ಥೀಮ್ ಅಡಿಯಲ್ಲಿ ಹುಬ್ಬಳ್ಳಿಯ ವಿವಿಧ ಶಾಲಾ ಮಕ್ಕಳಿಗೆ ವಾಯು ಮಾಲಿನ್ಯದ ಕುರಿತು ಚಿತ್ರಕಲಾ ಸ್ಫರ್ಧೆಯನ್ನು ನವೆಂಬರ್ 26 ರಂದು ಬೆಳಿಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಬಿ.ವಿ.ಬಿ. ಇಂಜನೀಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.   

1 ರಿಂದ 4ನೇ ತರಗತಿಯವರಿಗೆ ಅರಣ್ಯ ನಾಶದಿಂದ ಉಂಟಾಗುವ ದುಷ್ಪರಿಣಾಮಗಳು, 5 ರಿಂದ 7ನೇ ತರಗತಿಯವರಿಗೆ ವಾಯು ಮಾಲಿನ್ಯಕ್ಕೆ ಕಾರಣ ಹಾಗೂ ಅದರಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ

8 ರಿಂದ 10ನೇ ತರಗತಿಯವರಿಗೆ ಪರಿಸರ ಮಾಲಿನ್ಯದಿಂದ ಋತುಮಾನಗಳಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಅದರಿಂದ ಉಂಟಾಗುವ ದುಷ್ಪರಿಣಾಮಗಳು ವಿಷಯಗಳನ್ನು ನೀಡಲಾಗುತ್ತದೆ ಎಂದು ಧಾರವಾಡ ಪೂರ್ವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ.ದಾಮೋದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Exit mobile version