ಬೆಂಗಳೂರು, ನವೆಂಬರ್ 27 (ಕರ್ನಾಟಕ ವಾರ್ತೆ):
2023-24ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಪ್ರಶಸ್ತಿ (ಬೆಳೆ ಸ್ಪರ್ಧೆ)ಗಾಗಿ ಭಾಗವಹಿಸಲಿಚ್ಛಿಸುವ ರೈತ/ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಗೆ ಅನ್ವಯಿಸುವಂತೆ ನಿಗದಿತ ನಮೂನೆಯಲ್ಲಿ ಒಂದೇ ಅರ್ಜಿಯನ್ನು ಸಲ್ಲಿಸಬೇಕು. ಕೃಷಿಯಲ್ಲಿ ರೈತ ಮಹಿಳೆಯರನ್ನು ಪೆÇ್ರೀತ್ಸಾಹಿಸುವ ಸಲುವಾಗಿ ಹಾಗೂ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ರಾಜ್ಯ/ಜಿಲ್ಲಾ/ ತಾಲ್ಲೂಕು ಮಟ್ಟದ ಕೃಷಿ ಪ್ರಶಸ್ತಿಯನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ. ಪ್ರಯುಕ್ತ ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪ್ರಶಸ್ತಿಗೆ ಅರ್ಜಿಗಳನ್ನು ಸಲ್ಲಿಸುವ ಮುಖಾಂತರ ಕಾರ್ಯಕ್ರಮದ ಪ್ರಯೋಜನ ಪಡೆಯಬಹುದಾಗಿದೆ.
2023-24ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ರೈತ/ರೈತ ಮಹಿಳೆಯರು ಅರ್ಜಿ ಸಲ್ಲಿಸಲು ನವಂಬರ್ 30 ಕೊನೆಯ ದಿನಾಂಕವಾಗಿರುತ್ತದೆ. ಸ್ಪರ್ಧಿಸಬಹುದಾದ ಬೆಳೆಗಳ ವಿವರಗಳು, ಅರ್ಜಿ ನಮೂನೆ, ಪ್ರವೇಶ ಶುಲ್ಕ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಲಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
