Site icon MOODANA Web Edition

ಕೇಂದ್ರ ಸಶಸ್ತ್ರ ಪೊಲೀಸ್ ಮತ್ತು ಎಸ್‍ಎಸ್‍ಎಫ್ ಪಡೆಗಳ ಕಾನ್ಸ್‍ಟೇಬಲ್ ಮತ್ತು ಅಸ್ಸಾಂ ರೈಫಲ್ಸ್‍ನ ರೈಫಲ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು, ನವೆಂಬರ್ 29 (ಕರ್ನಾಟಕ ವಾರ್ತೆ):
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಮತ್ತು ಎಸ್‍ಎಸ್‍ಎಫ್ ಪಡೆಗಳಲ್ಲಿ ಕಾನ್ಸ್‍ಟೇಬಲ್ ಮತ್ತು ಅಸ್ಸಾಂ ರೈಫಲ್ಸ್‍ನಲ್ಲಿ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು  ಆಹ್ವಾನಿಸಿದೆ.


ಕಂಪ್ಯೂಟರ್ ಆಧಾರಿತ ಪರೀಕ್ಷೆಯು 2024ರ  ಫೆಬ್ರವರಿಯಲ್ಲಿ  ನಡೆಯಲಿದೆ. ಅರ್ಜಿ ಸಲ್ಲಿಸುವವರ ವಿದ್ಯಾರ್ಹತೆ ಮಾನ್ಯತೆ ಪಡೆದ ಮಂಡಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನು ಡಿಸೆಂಬರ್ 31, 2023 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-25502520, ನ್ನು ಸೋಮವಾರದಿಂದ ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಪರ್ಕಿಸಬಹುದು.  


ಅಭ್ಯರ್ಥಿಗಳು ಎಸ್‍ಎಸ್‍ಸಿ ಮುಖ್ಯ ಕಚೇರಿ ನವದೆಹಲಿಯ ಜಾಲತಾಣ https://ssc.nic.in ಮತ್ತು ಎಸ್‍ಎಸ್‍ಸಿ ಕರ್ನಾಟಕ-ಕೇರಳ ಪ್ರದೇಶದ ಜಾಲತಾಣ www.ssckkr.kar.nic.in ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version