ಬೆಂಗಳೂರು, ನವೆಂಬರ್ 29 (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್‍ನಲ್ಲಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಹ ಸಫಾಯಿ ಕರ್ಮಚಾರಿ / ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳು ಮತ್ತು ಅವರ ಅವಲಂಬಿತರಿಂದ ಅರ್ಜಿ ಸಲ್ಲಿಸಲು ಅವಧಿಯನ್ನು ಡಿಸೆಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.