19 C
Karnataka
Thursday, February 6, 2025
spot_img

ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಡಿಸೆಂಬರ್ 01 (ಕರ್ನಾಟಕ ವಾರ್ತೆ) :
2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಳಿಕ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.
ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ”ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ    ಪರೀಕ್ಷೆ – 1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 1 ರಿಂದ 15 ರವರೆಗೆ 15 ದಿನಗಳ ಕಾಲಾವಕಾಶವನ್ನು ನೀಡಲಾಗಿರುತ್ತದೆ.


ಆಕ್ಷೇಪಣೆಯನ್ನು ಮಂಡಲಿಯ ಇ-ಮೇಲ್ chairpersonkseab@gmail.com ಗೆ ಕಳುಹಿಸಬಹುದು ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Don’t miss your news!

We don’t spam! Read our privacy policy for more info.

Related Articles

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!