Site icon MOODANA Web Edition

ಡಿ.3 ರಂದು ವಿಶ್ವ ವಿಕಲಚೇತನರ ದಿನಾಚರಣೆ

ಹುಬ್ಬಳ್ಳಿ (ಕರ್ನಾಟಕ ವಾರ್ತೆ) ಡಿ.1: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಿಮ್ಸ್-ಆಶಾಕಿರಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಇನ್ನರ್ ವೀಲ್ ಕ್ಲಬ್ ಹುಬ್ಬಳ್ಳಿ-ಪಶ್ಚಿಮ ಜಿಲ್ಲೆ 317, ಸಕ್ಷಮ ಉತ್ತರ ಕರ್ನಾಟಕ ಪ್ರಾಂತ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಜಿಲ್ಲೆಯ ಸ್ವಯಂಸೇವಾ ಶಿಕ್ಷಣ ಸಂಸ್ಥೆಗಳು ಮತ್ತು ವಿಕಲಚೇತನರ ಸಂಘ ಸಂಸ್ಥೆಗಳು, ವಿ.ಆರ್.ಡಬ್ಲೂ, ಯು.ಆರ್.ಡಬ್ಲೂ, ಎಮ್.ಆರ್.ಡಬ್ಲೂ ಧಾರವಾಡ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 10 ಗಂಟೆಗೆ ಇಂದಿರಾ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ ಸಭಾಪತಿಯಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಅವರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕ ಮಹೇಶ ಟೆಂಗಿನಕಾಯಿ ಅಧ್ಯಕ್ಷತೆ ವಹಿಸುವರು. ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿಯರಾದ ಪದ್ಮಾವತಿ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version