Site icon MOODANA Web Edition

ಕೃಷಿಯಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ವರ್ಗಾವಣೆಗಾಗಿ ಸಾಮಾಜಿಕ ಜಾಲತಾಣಗಳ ಬಳಕೆ ಕುರಿತ ತರಬೇತಿ ಕಾರ್ಯಕ್ರಮ

ಬೆಂಗಳೂರು, ಡಿಸೆಂಬರ್ 26 (ಕರ್ನಾಟಕ ವಾರ್ತೆ):

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಮತ್ತು ಹೈದರಾಬಾದ್ ವಿಸ್ತರಣಾ ಶಿಕ್ಷಣ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ “ಕೃಷಿಯಲ್ಲಿ ತಂತ್ರಜ್ಞಾನದ ಪರಿಣಾಮಕಾರಿ ವರ್ಗಾವಣೆಗಾಗಿ ಸಾಮಾಜಿಕ ಜಾಲತಾಣಗಳ ಬಳಕೆ” ಕುರಿತ ತರಬೇತಿ ಕಾರ್ಯಕ್ರಮವನ್ನು ಡಿಸೆಂಬರ್ 27 ರಂದು ಬೆಳಗ್ಗೆ 11.15 ಕ್ಕೆ  ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನ, ಕೃಷಿ ವಿಶ್ವವಿದ್ಯಾನಿಲಯ ಜಿ.ಕೆ.ವಿ.ಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯ ಕುಲಪತಿಗಳಾದ ಡಾ.ಎಸ್.ವಿ.ಸುರೇಶ್‍ರವರು ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೇರಿಸಲಿದ್ದಾರೆ. ನವದೆಹಲಿಯ ರೈತಕಲ್ಯಾಣ ಮಂತ್ರಾಲಯದ ಕೃಷಿ ನಿರ್ದೇಶನಾಲಯ, ಜಂಟಿ ಕೃಷಿ ವಿಸ್ತರಣಾ ನಿರ್ದೇಶಕರಾದ ಡಾ. ಎಸ್.ಎಂ.ಕಲಿಕಾರ್, ರಾಜ್ಯ ಕೃಷಿ ಇಲಾಖೆಯ (ಮಾನವ ಸಂಪನ್ಮೂಲ) ಅಪರ ಕೃಷಿ ನಿರ್ದೇಶಕರು ಜೆ. ಕರುಣಾಕರ, ಹಾಗೂ ಜಂಟಿ ಕೃಷಿ ನಿರ್ದೇಶಕರಾದ ಡಾ.ಶಿವಕುಮಾರ್, ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಿಕೆವಿಕೆ, ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕರಾದ ಡಾ.ವಿ.ಎಲ್. ಮಧುಪ್ರಸಾದ್ ಅವರು  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಡಾ. ಕೆ.ಮಧುಬಾಬು, ಪ್ರಾಧ್ಯಾಪಕರು ಮತ್ತು ಕಾರ್ಯಕ್ರಮ ಸಂಯೋಜಕರು, ವಿಸ್ತರಣಾ ಶಿಕ್ಷಣ ಸಂಸ್ಥೆ, ಹೈದರಾಬಾದ್ ಮತ್ತು ಡಾ.ಕೆ.ಶಿವರಾಮು, ತರಬೇತಿ ಸಂಯೋಜಕರು ಮತ್ತು ಮುಖ್ಯಸ್ಥರು, ಸಿಬ್ಬಂದಿ ತರಬೇತಿ ಘಟಕ, ಕೃಷಿ ವಿಶ್ವವಿದ್ಯಾನಿಲಯ, ಜಿಕೆವಿಕೆ, ಬೆಂಗಳೂರು ರವರು ಈ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version