Site icon MOODANA Web Edition

ಡಿ.29 ರಂದು ವಿಶ್ವ ಮಾನವ ಜಯಂತಿ ಆಚರಣೆ

ಹುಬ್ಬಳ್ಳಿ (ಕರ್ನಾಟಕವಾರ್ತೆ) ಡಿ.26: ರಾಷ್ಟ್ರ ಕವಿ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಡಿಸೆಂಬರ್ 29 ರಂದು ವಿಶ್ವ ಮಾನವ ದಿನಾಚರಣೆಯನ್ನು ಆಚರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ ತಾಲೂಕು ತಹಸೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಯಿತು.
ಹುಬ್ಬಳ್ಳಿ ತಾಲೂಕು ತಹಸೀಲ್ದಾರ ಹಾಗೂ ಕಾರ್ಯನಿರ್ವಾಹಕ ದಂಡಾಧಿಕಾರಿಗಳಾದ ಕಲಗೌಡ್ರ ಪಾಟೀಲ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನಾಚರಣೆಯನ್ನು ವಿಶ್ವ ಮಾನವ ದಿನಾಚರಣೆಯೆಂದು ಹುಬ್ಬಳ್ಳಿ ತಾಲೂಕ ಆಡಳಿತ ಸಭಾಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು, ಕುವೆಂಪು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಗುವುದು. ಕಾರ್ಯಕ್ರಮದಲ್ಲಿ ಕುವೆಂಪು ಅವರ ಕುರಿತು ಉಪನ್ಯಾಸ ನೀಡಲಾಗುವುದು, ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿಯವರು ಮಾತನಾಡಿ ಕುವೆಂಪು ಅವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡೀರುವ ಕೊಡುಗೆ ಆಪಾರವಾಗಿದ್ದು, ಅವರ ಜನ್ಮದಿನಾಚರಣೆಯ ಅಂಗವಾಗಿ ಪ್ರಥಮ ಬಾರಿಗೆ ವಿಶ್ವಕರ್ಮ ಜಯಂತಿ ಆಚರಿಸುತ್ತಿರುವುದು ಸಂತಸತಂದಿದೆ ಎಂದರು.
ಸಭೆಯಲ್ಲಿ ವಿವಿಧ ಸಮುದಾಯದ ಮುಖಂಡರಾದ ಎಸ್.ಎಮ್ ಕಮ್ಮಾರ, ಮೌನೇಶ ಬಡಿಗೇರ, ವಿನೋದ ಬಡಿಗೇರ, ಸುರೇಶ ದ್ಯಾಮಣ್ಣವರ, ರವಿಕುಮಾರ ಕಮ್ಮಾರ, ರಾಜು ಆಲೂರು ಉಪಸ್ಥಿತರಿದ್ದರು.

Exit mobile version