ಹುಬ್ಬಳ್ಳಿ (ಕರ್ನಾಟಕವಾರ್ತೆ) ಡಿ.27: ಹುಬ್ಬಳ್ಳಿ ತಾಲೂಕು ಪಂಚಾಯತ ನಿರ್ದೇಶನದನ್ವಯ ಬು.ಹರಳೀಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿಸೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ ಮಕ್ಕಳ ವಿಶೇಷ ಗ್ರಾಮ ಸಭೆಯನ್ನು ಏರ್ಪಡಿಸಲಾಗಿದೆ.
ಸಭೆಯಲ್ಲಿ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಠಿಕ ಆಹಾರದ ಮಹತ್ವ, ಬಾಲ್ಯ ವಿವಾಹ ಪದ್ಧತಿ ನಿಯಂತ್ರಣ, ಬಾಲ್ಯ ಕಾರ್ಮಿಕ ನಿಯಂತ್ರಣ, ಬಾಲ್ಯ ಕೃಷಿ ಕಾರ್ಮಿಕ ಪದ್ಧತಿ ನಿರ್ಮೂಲನೆ, ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟುವುದು ಹಾಗೂ ಮಕ್ಕಳ ಮೂಲಭೂತ ಅವಶ್ಯಕತೆ ಬಗ್ಗೆ ಶಾಲಾ ಮಕ್ಕಳಿಂದ ಮುಕ್ತ ಚರ್ಚೆ ಜರಗಲಿದ್ದು, ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಭಾಗಿಯಾಗಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಬು.ಅರಳೀಕಟ್ಟಿ ಗ್ರಾ.ಪಂ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.