ಬೆಂಗಳೂರು, ಡಿಸೆಂಬರ್ 26 (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ/ ಉಪ ಚುನಾವಣೆಯ ಮತದಾನವು ಡಿಸೆಂಬರ್ 27 ರಂದು ನಡೆಯಲಿದೆ.
ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ, ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಹಾಗೂ ಉಪ- ಚುನಾವಣೆ ನಡೆಯುವ ಆಯಾ ನಗರ ಸ್ಥಳೀಯ ಸಂಸ್ಥೆಯ ಆಯಾ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಡಿಸೆಂಬರ್ 27 ರಂದು ಸಾರ್ವತ್ರಿಕ ರಜೆ ಘೋಷಿಸಿದೆ.
ಈ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಸರ್ಕಾರ ಆದೇಶಿಸಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು, ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು. ಈ ಆದೇಶವು ನೆಗೋಷಿಯೆಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881 ರ ಪ್ರಕಾರವೂ ಕೂಡ ಸಾರ್ವಜನಿಕ ರಜೆಯೆಂದು ಘೋಷಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.