Site icon MOODANA Web Edition

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಲಘು/ ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಡಿಸೆಂಬರ್ 27 (ಕರ್ನಾಟಕ ವಾರ್ತೆ):

2023-24 ನೇ ಸಾಲಿನ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಿ ಪ್ರಾದೇಶಿಕ ಸಾರಿಗೆ ಕಛೇರಿಯಿಂದ ಚಾಲನಾ ಅನುಜ್ಞಾ ಪತ್ರ / ಬ್ಯಾಡ್ಜ್ ನೀಡುವ ಕಾರ್ಯಕ್ರಮವನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿರುತ್ತದೆ.


ತರಬೇತಿ ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳು ಲಘು ವಾಹನ ಚಾಲನಾ ತರಬೇತಿಗಾಗಿ (ಕಾರ್/ಜೀಪ್) ಕನಿಷ್ಠ 18 ವರ್ಷ ವಯೋಮಿತಿ ತುಂಬಿರಬೇಕು. ಗರಿಷ್ಠ 45 ವರ್ಷ (ವಯೋಮಿತಿಯನ್ನು ಅರ್ಜಿ ಸಲ್ಲಿಸಲು ನಿಗಧಿ ಪಡಿಸಿರುವ ಕೊನೆಯ ದಿನಾಂಕಕ್ಕೆ ಪರಿಗಣಿಸಲಾಗುವುದು). ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ. ಪಾಸ್‍ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು.


ಭಾರಿ ವಾಹನ ಚಾಲನಾ ತರಬೇತಿಗಾಗಿ(ಬಸ್) ಕನಿಷ್ಠ 20 ವರ್ಷಗಳ ವಯೋಮಿತಿ ಪೂರ್ಣಗೊಂಡಿರಬೇಕು, ಗರಿಷ್ಠ 45 ವರ್ಷ (ವಯೋಮಿತಿಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಪರಿಗಣಿಸಲಾಗುವುದು). ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು. ಜನ್ಮ ದಿನಾಂಕದ ಬಗ್ಗೆ ಜನನ ಪ್ರಮಾಣಪತ್ರ ಅಥವಾ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಶಾಲಾ ವರ್ಗಾವಣಾ ಪ್ರಮಾಣ ಪತ್ರ ಅಥವಾ ನೋಟರಿಯಿಂದ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ. ಪಾಸ್‍ಪೋರ್ಟ್ ಅಳತೆಯ 5 ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು.


ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಅರ್ಹ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಲಘು/ಭಾರಿ ವಾಹನ ಚಾಲನಾ ತರಬೇತಿಯನ್ನು 30 ದಿನಗಳವರೆಗೆ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ವಸತಿ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ಉಚಿತವಾಗಿ ನೀಡಲಾಗುವುದು.


ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆ ಮತ್ತು 02 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನವ ಸಂಪನ್ಮೂಲ ಅಭಿವೃಧ್ಧಿ ಇಲಾಖೆ, 3ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು-560027 ಇಲ್ಲಿ ಸಲ್ಲಿಸಿ, ಜನವರಿ 31 ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.


ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ಜಾಲತಾಣ www.mybmtc.gov.in  ಹಾಗೂ  ದೂರವಾಣಿ ಸಂಖ್ಯೆಗಳು: 7760991085, 6364858520, 7892529634, 7760576556, 7760991348, 080-22537481 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Exit mobile version