ಬೆಂಗಳೂರು, ಡಿಸೆಂಬರ್ 26 (ಕರ್ನಾಟಕ ವಾರ್ತೆ):
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2023-24 ಸಾಲಿನ ಫೆಬ್ರವರಿ 10 ರಿಂದ 12 ರವರೆಗೆ “ಬರ ಸಹಿಷ್ಣುತೆಗಾಗಿ ತೋಟಗಾರಿಕೆ” ಎಂಬ ಧ್ಯೇಯದೊಂದಿಗೆ ಬಾಗಲಕೋಟೆಯ ಉದ್ಯಾನಗಿರಿ ಆವರಣದಲ್ಲಿ ತೋಟಗಾರಿಕೆ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಈ ತೋಟಗಾರಿಕೆ ಮೇಳದಲ್ಲಿ, ತೋಟಗಾರಿಕೆ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಕೃಷಿಕರಿಗೆ, ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಲ್ಲಿ ಪ್ರತಿಯೊಂದು ಜಿಲ್ಲೆಗೆ ಶ್ರೇಷ್ಠ ತೋಟಗಾರಿಕೆ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಅರ್ಜಿ ನಮೂನೆಯನ್ನು ತೋಟಗಾರಿಕಾ ಮಹಾವಿದ್ಯಾಲಯ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ, ಬೆಂಗಳೂರು ಅಥವಾ ಹತ್ತಿರದ ತೋಟಗಾರಿಕಾ ಇಲಾಖೆ ಕಚೇರಿ ಅಥವಾ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಜಾಲತಾಣ www.uhsbagalkot.karnataka.gov.in ಮೂಲಕ ಅರ್ಜಿ ನಮೂನೆ ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಯನ್ನು 2024 ನೇ ಜನವರಿ 10 ರೊಳಗಾಗಿ ಡೀನ್, ತೋಟಗಾರಿಕಾ ಮಹಾವಿದ್ಯಾಲಯ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣ, ಜಿಕೆವಿಕೆ, ಬೆಂಗಳೂರು -560065 ಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08354-230101, 6364064901, 9448344103, 9972159613, 8867574561 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.