28.5 C
Karnataka
Sunday, March 22, 2026
spot_img

ಅಪಘಾತ ಪರಿಹಾರ ಮೊತ್ತ ರೂ. 3 ಲಕ್ಷದಿಂದ ರೂ. 10 ಲಕ್ಷಕ್ಕೆ ಹೆಚ್ಚಳ

ಬೆಂಗಳೂರು, ಡಿಸೆಂಬರ್ 28 (ಕರ್ನಾಟಕ ವಾರ್ತೆ):

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ. 3 ಲಕ್ಷದಿಂದ ರೂ.10 ಲಕ್ಷಗಳಿಗೆ ಜನವರಿ 01, 2024 ರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ.

ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50.00 ರಿಂದ ರೂ.99.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.1.00 ಮತ್ತು ರೂ.100.00 ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.2.00 ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನು ಸಹ ಜನವರಿ 01, 2024 ರಿಂದ ಆಕರಿಸಲಾಗುವುದು.

ಈ ಹಿಂದೆ ರೂ.100 ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ರೂ. 1.00 ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ರೂ.1.00 ರಿಂದ ರೂ.49.00 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_img
spot_img
spot_img
spot_img
spot_img
spot_img

Related Articles

- Advertisement -spot_img

Latest Articles

error: Content is protected !!