ಹುಬ್ಬಳ್ಳಿ (ಕರ್ನಾಟಕವಾರ್ತೆ) ಡಿ.28: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಸ್ವಯಂ ಸೇವಾ ಸಂಸ್ಥೆಗಳ/ಸಂಘಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 30 ಕೊನೆಯ ದಿನವಾಗಿದ್ದು, ಸಮಾಜ ಕಲ್ಯಾಣ ಇಲಾಖೆ ಹುಬ್ಬಳ್ಳಿ ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆದು, ಕ್ರಮಬದ್ದವಾಗಿ ಅರ್ಜಿಯನ್ನು ಭರ್ತಿ ಮಾಡಿ, ದೃಢೀಕೃತ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಹುಬ್ಬಳ್ಳಿ, ಮಿನಿ ವಿಧಾನ ಸೌಧ ಹುಬ್ಬಳ್ಳಿ ಕಾರ್ಯಾಲಯಕ್ಕೆ ಬೇಟಿ ನೀಡುವ ಮೂಲಕ ಅಥವಾ ದೂರವಾಣಿ ಸಂಖ್ಯೆ : 9480843124/0836-2278066 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.